ಬೆಂಗಳೂರು
ಗ್ರಾಮ ಪಂಚಾಯಿತಿ, ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಸೇರಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಒಂದೇ ಬಾರಿಗೆ ನಡೆಸಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ
ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆಗಳು ಮತ್ತು ಜಿಲ್ಲಾ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಂದೇ ಬಾರಿಗೆ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಮೀಸಲಾತಿ ಬಗ್ಗೆ ಇರುವ ಸಮಸ್ಯೆ ಬಗೆಹರಿಸಲು ತುರ್ತಾಗಿ ಕ್ರಮ ಕೈಗೊಳ್ಳಲಾಗುತ್ತಿದ್ದು ಆದಷ್ಟು ಬೇಗ ಯುವಕರಿಗೆ ಅಧಿಕಾರ ನೀಡುವ ಉದ್ದೇಶವಿದೆ
ಇವಿಎಂ ಅಥವಾ ಮತಪತ್ರ ಬಳಕೆಯ ಬಗ್ಗೆ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಫೆಬ್ರವರಿ 15ರೊಳಗೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಜನಪ್ರತಿನಿಧಿಗಳ ಅಧಿಕಾರ ಮುಗಿಯಲಿದ್ದು ಈಗಾಗಲೇ ಸರ್ಕಾರ ಆಡಳಿತ ಅಧಿಕಾರಿಗಳನ್ನು ನೇಮಕ ಮಾಡಲು ಆದೇಶ ಹೊರಡಿಸಿದೆ
ಅನೇಕ ವರ್ಷಗಳಿಂದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿಗಳ ಅಧಿಕಾರ ಹೀನರಾಗಿರುವ ಎಲ್ಲಾ ಪಕ್ಷದ ಕಾರ್ಯಕರ್ತರುಗಳಿಗೆ ಈ ಸುದ್ದಿ ಕೇಳಿ ತುಂಬಾ ಖುಷಿಯನ್ನು ವ್ಯಕ್ತಪಡಿಸಿದ್ದು ಜನರೊoದಿಗೆ ಬೆರೆಯಲು ಉತ್ಸುಕರಾಗಿದ್ದಾರೆ ಅಧಿಕಾರ ವಿಕೇಂದ್ರೀಕರಣದ ಕನಸನ್ನು ಮತ್ತೊಮ್ಮೆ ಅನುಭವಿಸಲು ಸಿದ್ದರಾಗುತ್ತಿದ್ದಾರೆ

