ಕೋಲಾರ :
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಪದಾಧಿಕಾರಿಗಳು ಇಂದು ಕೆಜಿಎಫ್ ತಾಲ್ಲೂಕಿನ ಪಾರಂಡಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾವೇರಹಳ್ಳಿ ಗ್ರಾಮದಲ್ಲಿ ಬಿಸಿಲಿನ ತಾಪ ಹೆಚ್ಚಾದಂತೆ ಕುಡಿಯುವ ನೀರಿನ ಅಭಾವ ಕೂಡ ಹೆಚ್ಚಾಗಿದ್ದು ಇದೆ ಸಂದರ್ಭದಲ್ಲಿ ಗ್ರಾಮದಲ್ಲಿನ ಶುದ್ಧ ನೀರಿನ ಘಟಕ ಕೂಡ ನಿರ್ವಹಣೆ ಸರಿಯಾದ ರೀತಿಯಲ್ಲಿ ಆಗದಿರುವ ಕಾರಣ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿಕೊಡುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು,

ಪಿಡಿಒ ರವರು ತಕ್ಷಣ ಮನವಿಗೆ ಸ್ಪಂದಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸಿ ಕೊಡಲಾಗುವುದು ಎಂದು ಭರವಸೆ ನೀಡಿರುತ್ತಾರೆ

. ಈ ವೇಳೆ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಕೆಜಿಎಫ್ ತಾಲ್ಲೂಕು ಅಧ್ಯಕ್ಷರಾದ ತ್ರಿಲೋಕ್ ರವರು, ಜಿಲ್ಲಾ ಗೌರವ ಅಧ್ಯಕ್ಷರು ಆದ ಜೆ.ಸೋಮಸುಂದರ ರೆಡ್ಡಿ ರವರು ಹಾಗೂ ಇನ್ನಿತರೆ ಕಾರ್ಯಕರ್ತರು ಹಾಜರಿದ್ದರು…

