
ಮಡಿಕೇರಿ ; ಕೊಡಗು ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ನೀಡಲು ಆಯಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಕೊಡಗು ಜಿಲ್ಲಾಧಿಕಾರಿ ತಿಳಿಸಿದ್ದಾರೆ
ಅವಶ್ಯಕತೆ ಅನಿವಾರ್ಯಗಳನ್ನು ಗಮನಿಸಿ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಹಾಗೂ ಎಲ್ಲ ತಾಲ್ಲೂಕುಗಳ BEO ಸೇರಿದಂತೆ ತಹಸೀಲ್ದಾರಗಳಿಗೂ ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ
ರಜೆ ನೀಡಿದ ದಿನಗಳಲ್ಲಿ ನಡೆಯಬೇಕಿದ್ದ ಪಾಠ ಪ್ರವಚನಗಳನ್ನು ಮತ್ತೊಂದು ದಿನಗಳಲ್ಲಿ ಸರಿದೂಗಿಸುವಂತೆಯೂ ತಿಳಿದ್ದಾರೆ.

