ಕುಣಿಗಲ್, ಆ. 6: ತಾಲೂಕಿನ 36 ಗ್ರಾಮ ಪಂಚಾಯಿತಿ ಮೀಸಲಾತಿ ಅವೈಜ್ಞಾನಿಕ ಹಂಚಿಕೆ ಪ್ರಕ್ರಿಯೆಯಲ್ಲಿ ದಲಿತ ಸಮುದಾಯಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಜಗದೀಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಇಂದು ತಮ್ಮ ಜೆಡಿಎಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಣಿಗಲ್ ತಾಲೂಕಿನಲ್ಲಿ ಇರುವ 36 ಗ್ರಾಮ ಪಂಚಾಯಿತಿಗಳ ಮೀಸಲಾತಿ ಹಂಚಿಕೆ ಅವೈಜ್ಞಾನಿಕವಾಗಿ ನಡೆದಿದೆ ಎಂದು ಆರೋಪಿಸಿ, ಈ ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅವರು, “ದಲಿತ ಸಮುದಾಯದ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಕೇವಲ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಬೂಂದಿ ತಿಂದು ಬಂದರೆ ಸಾಲದು, ತಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿರುವ ಸಂದರ್ಭದಲ್ಲಿ ಎಲ್ಲ ದಲಿತ ಮುಖಂಡರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು” ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಕುಣಿಗಲ್ ತಹಸೀಲ್ದಾರ್ ಅವರ ಕಾರ್ಯವೈಖರಿಯ ಮೇಲೂ ಅಸಮಾಧಾನ ವ್ಯಕ್ತಪಡಿಸಿದ ಅವರು ಈ ರೀತಿ ರಾಜಕೀಯ ಪಕ್ಷಗಳಿಗೆ ತಳಹಾಕಿ ಕುಣಿಯುವುದರ ಬದಲು ರಾಜೀನಾಮೆ ಕೊಟ್ಟು ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಮಾತಿನಲ್ಲಿ ತೀಕ್ಷ್ಣವಾಗಿ ಟೀಕಿಸಿ ಮೀಸಲಾತಿ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿದರು. ಈ ಸಂಬಂಧ ಸರ್ಕಾರ ಕೂಡಲೇ ಪರಿಶೀಲನೆ ನಡೆಸಿ ನ್ಯಾಯಸಮ್ಮತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯ ಸಂಪೂರ್ಣ ವಿಡಿಯೋ ಇಲ್ಲಿ ವೀಕ್ಷಣೆ ಮಾಡಬಹುದು
ಇದು ಅಧಿಕಾರಿಗಳು ನಡೆಸಿರುವ ಮೀಸಲಾತಿ ಅಲ್ಲ ರಾಜಕೀಯಕ್ಕಾಗಿ ನಡೆಸಿರುವ ಮೀಸಲಾತಿ ನಮ್ಮ ಆರೋಪ ಯಾರಿಗೆ ಅರ್ಥವಾಗಬೇಕು ಅವರಿಗೆ ಆಗುತ್ತದೆ ಎಂದು ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು
ಮೀಸಲಾತಿ ಹಂಚಿಕೆಯಲ್ಲಿ ದಲಿತ ಸಮುದಾಯಕ್ಕೆ ಹಾಗೂ ಹಿಂದುಳಿದ ವರ್ಗಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹಲವಾರು ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು

