NCR ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ಎಂಬುವರ ಬಳಿ 20 ಸಾವಿರ ಲಂಚಕ್ಕೆ ಒತ್ತಾಯಪಡಿಸಿ ಲೋಕಾಯುಕ್ತಕ್ಕೆ ಲಾಕ್ ಆದ ಹಳೇಬೀಡು PSI ಮಂಜುನಾಥ್
ಹಳೇಬೀಡು ಪೋಲಿಸ್ ಠಾಣೆ ವ್ಯಾಪ್ತಿಯ ಸಂತೋಷ್ಎಂಬುವರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎನ್ ಸಿ ಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಸಾವಿರ ಹಣ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆಂದು ಲೋಕಾಯುಕ್ತಕ್ಕೆ ದಾಖಲೆ ಸಮೇತ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ಕೊಂಡು ಕಾರ್ಯಾಚರಣೆ ರೂಪಿಸಿದ ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪ ಮತ್ತು ಗವಿರಾಜ್ ಅಧಿಕಾರಿಗಳು, ದೂರುದಾರರ ಮೂಲಕ ಲಂಚದ ಹಣವನ್ನು ನೀಡುವಂತೆ ವ್ಯವಸ್ಥೆ ಮಾಡಿದ್ದರು. ಹೋಟೆಲ್ ಒಂದರಲ್ಲಿ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಸ್ಥಳದಲ್ಲೇ ಪಿಎಸ್ಐ ಮಂಜುನಾಥ್ ಅವರನ್ನು ವಶಕ್ಕೆ ಪಡೆದಿದ್ದಾರೆ, ಕಾರ್ಯಾಚರಣೆಯ ವೇಳೆ ₹20 ಸಾವಿರ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಬಳಿಕ ಪಿಎಸ್ಐ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಲಂಚದ ಬೇಡಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

