ಕಲ್ಬುರ್ಗಿ ; ಸರ್ಕಾರವು ರಾಜ್ಯದ 101 ತಾಲೂಕುಗಳನ್ನು ಬರಗಾಲ ಪೀಡಿತ ಎಂದು ಘೋಷಿಸಿ ಕಲಬುರ್ಗಿ ಜಿಲ್ಲೆಯನ್ನು ಕೈಬಿಟ್ಟಿರುವುದು ಜಿಲ್ಲೆಯ ರೈತರಿಗೆ ಮಾಡಿದ ದ್ರೋಹ ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ S ಹೂಗಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕಲಬುರ್ಗಿ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲಿಯೂ ರಾಜ್ಯ ಸರ್ಕಾರವು 101 ತಾಲೂಕುಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಘೋಷಣೆಯಿಂದ ಕೈಬಿಟ್ಟಿರುವುದು ಅತ್ಯಂತ ಖಂಡನೀಯವಾಗಿದೆ ಎಂದಿದ್ದಾರೆ
ಕಲಬುರ್ಗಿ ಜಿಲ್ಲೆಯ ರೈತರು ಕೂಡ ಬರದಿಂದ ತೀವ್ರವಾಗಿ ಬಾಧಿತರಾಗಿದ್ದಾರೆ. ರೈತರ ಸಂಕಷ್ಟವನ್ನು ವಾಸ್ತವವಾಗಿ ಪರಿಶೀಲಿಸಿ, ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರ ಮತ್ತು ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು.
ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಸರ್ಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದ್ದರೂ, ಯಾವುದೇ ಸೂಕ್ತ ಕ್ರಮ ಕೈಗೊಳ್ಳದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿ ಸರ್ಕಾರ ಮೌನ ವಹಿಸಿದರೆ ಅದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಆದ್ದರಿಂದ ರಾಜ್ಯ ಸರ್ಕಾರವು ಕೂಡಲೇ ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಇಲ್ಲದಿದ್ದರೆ ಕಲಬುರ್ಗಿ ಜಿಲ್ಲೆಯ ರೈತರು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಸರ್ಕಾರದ ವಿರುದ್ಧ ಕಲಬುರ್ಗಿ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ
ಜಿಲ್ಲೆಯ ರೈತರ ತಾಳ್ಮೆಯನ್ನು ಪರೀಕ್ಷಿಸದೆ, ತಕ್ಷಣವೇ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವಿಕ ಸಮೀಕ್ಷೆ ನಡೆಸಿ, ಕಲಬುರ್ಗಿ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆಗಳ ಪಟ್ಟಿಗೆ ಸೇರಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಅವರು ವಿಡಿಯೋ ಮಾಡಿ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ

