2020-25ನೇ ಅವಧಿಯ ಗ್ರಾಮ ಪಂಚಾಯಿತಿಗಳ ಆಡಳಿತ ಅವಧಿಯು 2026 ರಲ್ಲಿ ಅಂತ್ಯಗೊಳ್ಳಲಿದ್ದು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ 2025ರ ಡಿಸೆಂಬರ್ ಮಾಹೆಯಲ್ಲಿ ಸಾರ್ವತ್ರಿಕ ಚುನಾವಣೆಯನ್ನು ನಡೆಸಬೇಕಾಗಿತ್ತು, ಸಾರ್ವತ್ರಿಕ ಚುನಾವಣೆ ನಡೆಸುವ ಆರು ತಿಂಗಳು ಮುಂಚಿತವಾಗಿ ಮತದಾರರ ಪಟ್ಟಿ ಮುದ್ರಣ ಒಳಗೊಂಡಂತೆ, ಇತರೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳನ್ನು ಆಯೋಗವು ಮಾಡಿಕೊಳ್ಳಬೇಕಾಗಿರುತ್ತದೆ. ಆದುದರಿಂದ ನಿಗಧಿತ ಕಾಲಮಿತಿಯಲ್ಲಿ ಮೀಸಲಾತಿಯ ಅಧಿಸೂಚನೆಯನ್ನು ಹೊರಡಿಸಿ, ಅದರ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಆಯುಕ್ತರು, ರಾಜ್ಯ ಚುನಾವಣಾ ಆಯೋಗ 26-06-2025 ರಲ್ಲೇ ಬಂದಿರುವ ಪತ್ರದಂತೆ ಇದೀಗ ದಿನಾಂಕ 28-01-2026ರಂದು ಸರ್ಕಾರದ ಕಾರ್ಯದರ್ಶಿ ಪಂಚಾಯತ್ ರಾಜ್ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ

ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿಯು ಜನವರಿ-2026 ರಿಂದ 2026 ಮಾರ್ಚ್ ತಿಂಗಳವರೆಗೆ ಮುಕ್ತಾಯಗೊಳ್ಳುತ್ತಿರುವುದರಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳಿಗೆ 2026-31ನೇ ಸಾಲಿನ ಗ್ರಾಮ ಪಂಚಾಯಿತಿಯ ಸಾರ್ವತ್ರಿಕ ಚುನಾವಣೆ ನಡೆಸಲು ಬೇಕಾಗಿರುವ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.ಜೊತೆಗೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ, ತೆಗೆದುಕೊಂಡ ಕ್ರಮದ ವರದಿಯನ್ನು ಸರ್ಕಾರಕ್ಕೆ ಮತ್ತು ರಾಜ್ಯ ಚುನಾವಣ ಆಯೋಗಕ್ಕೆ ವರದಿ ಸಲ್ಲಿಸುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ


