CC Camara ಸಂಗ್ರಹ ದಾಖಲೆ ನೀಡದ DySP ವಿರುದ್ಧ ತನಿಖೆಗೆ ಮಾಹಿತಿ ಆಯೋಗ ಆದೇಶ
ಮಂಡ್ಯ :
ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ, ಮಂಡ್ಯ ಜಿಲ್ಲೆ ಮಾಜಿ ಎಸ್ಪಿ ಹಾಗೂ ಮಳವಳ್ಳಿ ಡಿವೈಎಸ್ಪಿಗೆ ವಿರುದ್ಧ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಗರಂ

ಮಾಹಿತಿ ಹಕ್ಕು ಕಾಯಿದೆಯಡಿ ಸಾರ್ವಜನಿಕರು ಕೇಳಿದ ಮಾಹಿತಿಯನ್ನು ನೀಡದೆ ನಿರ್ಲಕ್ಷ್ಯ ವಹಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಇಲಾಖಾ ತನಿಖೆ ಹಾಗೂ ಶಿಸ್ತು ಕ್ರಮಕ್ಕೆ ಮಾಹಿತಿ ಆಯೋಗ ಆದೇಶಿಸಲಾಗಿದೆ.
ಮಳವಳ್ಳಿಯ ನಾಗರಾಜು ಎಂಬುವರು 2022ರಲ್ಲಿ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿ ಕೋರಿ ಮಾಹಿತಿ ಹಕ್ಕು ಕಾಯ್ದೆ 2005ರ 6(1)ರಡಿ ಅರ್ಜಿ ಸಲ್ಲಿಸಿದ್ದರು.
ಆದರೆ, ಅಂದಿನ ಮಳವಳ್ಳಿ ಡಿವೈಎಸ್ಪಿ ನವೀನ್ ಕುಮಾರ್ ಅರ್ಜಿಯನ್ನು ಸಂಬಂಧಪಟ್ಟವರಿಗೆ ವರ್ಗಾಯಿಸದೆ, ಮಾಹಿತಿಯನ್ನು ನೀಡಲು ಅವಕಾಶವಿಲ್ಲ ಎಂದು ಹಿಂಬರಹ ನೀಡಿದ್ದರು.
ಅದರ ವಿರುದ್ಧ ಮಂಡ್ಯದ ಅಂದಿನ ಎಸ್ಪಿ ಎನ್. ಯತೀಶ್ ಅವರಿಗೆ ಪ್ರಥಮ ಮೇಲ್ಮನವಿ ಸಲ್ಲಿಸಿದರು ಆದರೆ ಪ್ರಥಮ ಮೇಲ್ಮನವಿ ಪ್ರಾಧಿಕಾರಗಳು ಯಾವುದೇ ವಿಚಾರಣೆ ನಡೆಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದರು.

ಆದ್ದರಿಂದ ಮಾಹಿತಿ ಹಕ್ಕು ಆಯೋಗಕ್ಕೆ ಎರಡನೇ ಮೇಲ್ಮನವಿ ಸಲ್ಲಿಸಿದ್ದರು ಮೇಲ್ಮನವಿ ವಿಚಾರಣೆ ನಡೆಸಿದ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ಆ ಇಬ್ಬರೂ ಅಧಿಕಾರಿಗಳಾದ ಎನ್. ಯತೀಶ್ ಮತ್ತು ನವೀನ್ ಕುಮಾರ್ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಶಿಸ್ತುಕ್ರಮ ಜರುಗಿಸುವಂತೆ ಡಿಜಿಪಿ ಸಲೀಂ ಅವರಿಗೆ ಸೂಚನೆ ನೀಡಿದ್ದಾರೆ
ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸುವ ಅರ್ಜಿಗಳನ್ನು ತಾತ್ಸಾರವಾಗಿ ಪರಿಗಣಿಸುವ ಹಾಗೂ ಸಾರ್ವಜನಿಕರನ್ನು ಅಲೆದಾಡಿಸುವ ಸಾರ್ವಜನಿಕ ಅಧಿಕಾರಿಗಳಿಗೆ ಇದೊಂದು ಎಚ್ಚರಿಸುವ ಆದೇಶವಾಗಿದೆ
ಎಂದು ನಾಗರಿಕರ ಪ್ರಶಂಸೆಯಾಗಿದೆ.

