
ಬೆಂಗಳೂರು:
ನ್ಯಾಯಾಲಯದಲ್ಲಿ (Court) ಕೆಲಸ ಕೊಡಿಸೋದಾಗಿ ಸುಮಾರು 500ಕ್ಕೂ ಹೆಚ್ಚು ಜನರಿಂದ ಹಣ ಪಡೆದು ವಂಚಿಸಿದ್ದ ಗಂಡ ಹೆಂಡತಿಯನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ
ಬಂಧಿತ ಆರೋಪಿಗಳು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ.
ಈ ಜನುಮದ ಜೋಡಿಗಳು ನಿರೋದ್ಯೋಗಿಗಳನ್ನೂ ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಅಮಾಯಕರನ್ನು ಟಾರ್ಗೆಟ್ ಮಾಡಿ ನಂಬಿಸಿ ವಂಚಿಸುತ್ತಿದ್ದರು. ನ್ಯಾಯಾಲಯಗಳಲ್ಲಿ `ಡಿ’ ಗ್ರೂಪ್ ಕೆಲಸ ಕೊಡಿಸೋದಾಗಿ ಒಬ್ಬೊಬ್ಬರಿಂದ 10 ರಿಂದ 25 ಲಕ್ಷ ರೂ. ವರೆಗೆ ಹಣ ಪಡೆದು ಮೋಸ ಮಾಡಿದ್ದಾರೆ. ಹೀಗೆ ಸುಮಾರು 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ.
ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ಆರ್ಡರ್ ಪ್ರತಿ ಎಂದು ಅಮಾಯಕರಿಗೆ ಈ ಜೋಡಿ ನಂಬಿಸಿತ್ತು. ಕೆಲಸ ಕೇಳಿದ್ರೆ ನಾಳೆ ನಾಡಿದ್ದು ಎಂದು ಕಥೆ ಹೇಳುತ್ತಿದ್ದರು. ಕೊನೆಗೆ ಫೋನ್ ರಿಸೀವ್ ಮಾಡುತ್ತಲೇ ಇರಲಿಲ್ಲ. ಮೋಸ ಹೋಗಿರೋದು ಗೊತ್ತಾದ ನಂತರ ಸಿಸಿಬಿಗೆ ಸಂತ್ರಸ್ಥರು ದೂರು ನೀಡಿದ್ದರು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ CCB ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ…
ಈ ರೀತಿಯಾಗಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸೇರಿ ಬೇರೆ ಬೇರೆ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ಹಣ ವಸೂಲಿ ಮಾಡಿರುವುದು ಮತ್ತು ಮಾಡುತ್ತಿರುವ ಬಗ್ಗೆ ಮತ್ತಷ್ಟು ದೂರುಗಳು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಗೂ ಬರುತ್ತಿದ್ದು ಪರಿಸ್ಥಿಗಳನ್ನು ಅವಲೋಕಿಸಿಕೊಂಡು CCB ಗೆ ದೂರು ನೀಡಲಾಗುವುದು ಎಂದು ರಾಜ್ಯಾಧ್ಯಕ್ಷ ಹೆಚ್ ಜಿ ರಮೇಶ್ ತಿಳಿಸಿದ್ದಾರೆ

