ಬಾಗಲಕೋಟೆ:
ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ರಿಲೀಸ್ ಮಾಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸರ ಸಾಕ್ಷಿ ಕಲೆಹಾಕಿದ ದೂರುದಾರ ಈ ಸಂಬಂಧ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ನಿರೀಕ್ಷೆಯಂತೆ ಲೋಕಾಯುಕ್ತ ಪೊಲೀಸರು ಬುಧವಾರ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದು, 1.70 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಮಯದಲ್ಲಿಯೇ ಪಿಎಸ್ಐ ಮತ್ತು ಕಾನ್ಸ್ಟೇಬಲ್ ಇಬ್ಬರೂ ಲಂಚದ ಹಣದ ಸಮೇತ ಬಲೆಗೆ ಬಿದ್ದಿದ್ದಾರೆ
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು ವಿಚಾರಣೆ ಮುಂದುವರಿಸಿದ್ದಾರೆ

