ಅಧಿಕಾರ ವಿಕೇಂದ್ರೀಕರಣ ನಿಯಮ ಪಾಲಿಸದ ಸರ್ಕಾರ ಮತ್ತು ವಿರೋಧ ಪಕ್ಷಗಳ ವರ್ತನೆ ಬಗ್ಗೆ ರಾಜ್ಯಪಾಲರ ಗಮನ ಸೆಳೆಯಲು ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ವಿವಿಧ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಪ್ರತಿಭಟಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಇತರೆ ಸ್ಥಳೀಯ ಸಂಸ್ಥೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳ ಮೂಲಕ ಅಧಿಕಾರವನ್ನು ತಳಮಟ್ಟಕ್ಕೆ ವಿಕೇಂದ್ರೀಕರಿಸಿ ಜನಸಾಮಾನ್ಯರಿಗೆ ಆಡಳಿತದಲ್ಲಿ ನೇರ ಪಾಲ್ಗೊಳ್ಳುವ ಅವಕಾಶವನ್ನು ನೀಡುವುದು ಸಂವಿಧಾನದ ಮೂಲ ಉದ್ದೇಶವಾಗಿದೆ.
ಆದರೆ, ಇತ್ತೀಚಿಗೆ ಅನೇಕ ವರ್ಷಗಳಿಂದ ರಾಜ್ಯ ಸರ್ಕಾರವು ಈ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವಲ್ಲಿ ನಿಯಮಗಳನ್ನು ಉಲ್ಲಂಘಿಸಿರುವುದು ಗಮನಕ್ಕೆ ಬರುತ್ತಿದೆ. ವಿಶೇಷವಾಗಿ,ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದಿರುವುದು,ಆಡಳಿತಾತ್ಮಕ ಹಸ್ತಕ್ಷೇಪ ಹೆಚ್ಚಾಗಿರುವುದು,ಸ್ಥಳೀಯ ಸಂಸ್ಥೆಗಳ ಸ್ವಾಯತ್ತತೆಯನ್ನು ಹಾಳು ಮಾಡುವ ಕ್ರಮಗಳು,ಇವುಗಳು ಪ್ರಜಾಪ್ರಭುತ್ವದ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ.
ಆದರೂ ಸಹ ವಿರೋಧ ಪಕ್ಷಗಳು ಈ ಬಗ್ಗೆ ಧ್ವನಿ ಎತ್ತದೆ ಸರ್ಕಾರದ ಧೋರಣೆಯ ಪರವಾಗಿ ನಿಂತಿರುವುದಲ್ಲದೆ ಅಧಿಕಾರ ವಿಕೇಂದ್ರೀಕರಣ ವಿರುದ್ಧವಾಗಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ ಈ ಹಿನ್ನೆಲೆಯಲ್ಲಿ, ರಾಜ್ಯಪಾಲರಾಗಿ ನಿಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಅಧಿಕಾರ ವಿಕೇಂದ್ರೀಕರಣಕ್ಕೆ ಚುನಾವಣೆ ನಡೆಸದೆ ಅಡ್ಡಿಯಾಗಿರುವ ಹಾಗೂ ಅವರದೇ ಪಕ್ಷದ ತಮ್ಮ ಕಾರ್ಯಕರ್ತರು ಅಧಿಕಾರದಿಂದ ದೂರ ಉಳಿಯುವಂತೆ ವಂಚನೆ ಮಾಡಿರುವ ಸಂಬಂಧಪಟ್ಟ 224 ಶಾಸಕರು ಅಂದರೆ ಆಡಳಿತ ಮತ್ತು ವಿರೋಧ ಪಕ್ಷ ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ನಿಯಮಾನಸಾರ ಕ್ರಮಕ್ಕಾಗಿ ತನಿಖೆ ನಡೆಸುವಂತೆ ಹಾಗೂಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸುವಂತೆ,
ಹಾಗೂ ಸಾಂವಿಧಾನಿಕ ತಿದ್ದುಪಡಿ ಕಾಯ್ದೆ 73 ಮತ್ತು 74 1992ರಂತೆ ಅಧಿಕಾರ ವಿಕೇಂದ್ರೀಕರಣವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ,ಸೂಕ್ತ ನಿರ್ದೇಶನ ನೀಡುವಂತೆ ವಿನಂತಿಸಿದರು
ನಿಮ್ಮ ಹಸ್ತಕ್ಷೇಪದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ನ್ಯಾಯ ದೊರೆಯಲಿದೆ ಎಂಬ ವಿಶ್ವಾಸದೊಂದಿಗೆ ಪ್ರತಿಭಟನಾತ್ಮಕವಾಗಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ದೂರು ಸಲ್ಲಿಸಿದರು

