ಚಾಮರಾಜನಗರ;
ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು, 67 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಇಂದು ಸೋಮವಾರ ಹುಣ್ಣಿಮೆಯ ಪ್ರಯುಕ್ತ ವಿಶೇಷ ಪೂಜೆಗಳು ಜರುಗುವ ದಿನ ಹೀಗಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಮಾದಪ್ಪನ ದರ್ಶನ ಮುಗಿಸಿಕೊಂಡು ಮೈಸೂರಿಗೆ ವಾಪಸ್ ಪ್ರಯಾಣಿಸುತ್ತಿದ್ದ KSRTC KA 57 F 3964 ಸಂಖ್ಯೆಯ ಸಾರಿಗೆ ವಾಹನದ ಮುಂಭಾಗದ ಟೈರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಗೆ ಪಲ್ಟಿ ಹೊಡೆದಿದೆ
ಗಂಭೀರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು ಇದೇ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 67 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಳ್ಳೇಗಾಲದ ಪುಟ್ಟನಂಜಮ್ಮ(60) ಮತ್ತು ಕುದೇರು ನಿವಾಸಿ ಮಹೇಶ್(50) ತಳದಲ್ಲಿ ಮೃತಪಟ್ಟವರೆಂದು ತಿಳಿದು ಬಂದಿದ್ದು ಸದ್ಯ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ

