ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಮಾಲೋಚಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಲಕ್ ಸಾಬ್ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಇದರಿಂದ ಬೇಸತ್ತ ರವಿಚಂದ್ರನ್ ಹಾವೇರಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ
ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಚಿಕ್ಕ ಮರಳಿ ಹಳ್ಳಿ ಗ್ರಾಮದ ನಿಂಗಪ್ಪ ಮೈಸೂರು ಅವರ ಮಗ ರವಿಚಂದ್ರ ಅವರು ಸ್ವಂತ ಉದ್ದಿಮೆ ನಡೆಸಲೂ ಯೋಜನೆ ರೂಪಿಸಿ ಮೊಬೈಲ್ ಕ್ಯಾಂಟೀನ್ ಸ್ಥಾಪಿಸಲು ಪ್ರವಾಸೋದ್ಯಮ ಇಲಾಖೆಯಲ್ಲಿ ಸಿಗಬಹುದಾದ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸಿರುತ್ತಾರೆ ಈ ಸಂಬಂಧ ಕಚೇರಿಗೆ ಪದೇಪದೇ ಭೇಟಿ ನೀಡಿ ಸರ್ಕಾರಿ ಸೌಲಭ್ಯ ಪಡೆದುಕೊಳ್ಳಲು ಒತ್ತಾಯಿಸಿರುತ್ತಾರೆ

ರವಿಚಂದ್ರ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ ಎಸ್ ಕೌಲಾಪುರೆ ಇವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸಿ ಮಧುಸೂಧನ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿ ನಿಯಮ ಅನುಸಾರ ಲಂಚದ ಹಣ ಪಡೆಯುವಾಗ ಟ್ರ್ಯಾಪ್ ಮಾಡಿ ಇಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವರದಿ: ಶಿವಾನಂದ ಮಾಳಗಿ ಹಾವೇರಿ

