ಬದರೀನಾಥದಿಂದ ಮರಳುವಾಗ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಸೇರಿ ಐವರು ವಕೀಲರು ದುರ್ಮರಣ
ಬೆಂಗಳೂರು / ಡೆಹ್ರಾಡೂನ್:
ಉತ್ತರಾಖಂಡದ ಪವಿತ್ರ ಬದರೀನಾಥ ಧಾಮದ ದರ್ಶನ ಮುಗಿಸಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರು ಮೂಲದ ಐವರು ಸೇರಿದಂತೆ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ಬಳಿ ಇಂದು (ಅಕ್ಟೋಬರ್ 30) ಮಧ್ಯಾಹ್ನ ಈ ದುರಂತ ಸಂಭವಿಸಿದೆ. ‘ಟ್ರಾನ್ಸ್ ಭಾರತ್’ ಕಂಪನಿಗೆ ಸೇರಿದ ‘VT-HCX’ ನೋಂದಣಿ ಸಂಖ್ಯೆಯ ಹೆಲಿಕಾಪ್ಟರ್, ಏಕಾಏಕಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಚಾಲಕನ ನಿಯಂತ್ರಣ ತಪ್ಪಿ ಪತನಗೊಂಡಿದೆ.

ಮೃತರ ವಿವರ:
ಈ ದುರಂತದಲ್ಲಿ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಸೇರಿದಂತೆ ಬೆಂಗಳೂರಿನ ಐವರು ಪ್ರವಾಸಿಗರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟ ಬೆಂಗಳೂರಿನ ನಿವಾಸಿಗಳನ್ನು:
- ಅರುಣ್ ಸಾಲಂಕೆ (ಬೆಂಗಳೂರು ಸಿಸಿಬಿ ಇನ್ಸ್ಪೆಕ್ಟರ್)
- ಸುಧೀರ್ (ವಕೀಲರು)
- ಶಂಕರೇಗೌಡ (ವಕೀಲರು)
- ಹೆಚ್.ಎಸ್. ನಟರಾಜ್ (ವಕೀಲರು)
- ಪ್ರತಾಪ್ (ವಕೀಲರು) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ಬೆಂಗಳೂರಿನಿಂದ ಉತ್ತರಾಖಂಡ ಪ್ರವಾಸಕ್ಕೆ ತೆರಳಿದ್ದರು. ಚಮೋಲಿ ಜಿಲ್ಲಾಡಳಿತ ಹಾಗೂ ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಪರಿಹಾರ ಕಾರ್ಯಾಚರಣೆ ತೀವ್ರಗೊಳಿಸಿವೆ. ಹಠಾತ್ ಎದುರಾದ ದಟ್ಟ ಮಂಜು ಮತ್ತು ಪ್ರತಿಕೂಲ ಹವಾಮಾನವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಕುಣಿಗಲ್ ತಾಲೂಕಿನ ಎಲ್ಲಾ ಪೊಲೀಸ್ ಅಧಿಕಾರಿಗಳು ವಿವಿಧ ಮುಖಂಡರುಗಳು ಸ್ನೇಹಿತರು ಆಪ್ತರು ಆಶ್ಚರ್ಯ ವ್ಯಕ್ತಪಡಿಸಿರುವುದಲ್ಲದೆ ಶಾಂತಿ ಕೋರುತ್ತಾ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ

